ಬೆಂಗಳೂರು : ಭಾರತದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್ (7,539 ಲಕ್ಷ ಕೋಟಿ) ನಷ್ಟು ಅಗಾಧ ಮೊತ್ತವನ್ನು ಹೂಡಲಾಗುವುದು.ದೇಶದಲ್ಲಿ ಬಂಡವಾಳ ಹೂಡಿಕೆದಾರರ ಪಾಲಿಗೆ ಹಿಂದಿನ ಕೆಂಪುಪಟ್ಟಿಯ ಸಮಸ್ಯೆ ಕೊನೆಗೊಂಡಿದ್ದು, ಈಗ ರತ್ನಗಂಬಳಿಯ ಸ್ವಾಗತವಿದೆ. ಅದರಲ್ಲೂ ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ ಮತ್ತು ಸಮರ್ಥ ನಾಯಕತ್ವದ ತವರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.25ನೇ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಅವರು, ತಂತ್ರಜ್ಞಾನಕ್ಕೆ