ಬೆಂಗಳೂರು ವಿವಿ ಆವರಣದಲ್ಲಿ ಅವೈಜ್ಞಾನಿಕ ರಸ್ತೆ ಹಂಪ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿವಿ ರಿಜಿಸ್ಟ್ರಾರ್ಗೆ ಬಿಬಿಎಂಪಿ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಅವೈಜ್ಞಾನಿಕ ರಸ್ತೆ ಉಬ್ಬುಗಳಿಂದ ರಸ್ತೆ ಅಪಘಾತವಾಗುತ್ತಿದೆ. ರಸ್ತೆ ಹಂಪ್ ನಿರ್ಮಿಸಿದ ಕಾರಣಕ್ಕಾಗಿ ಅಪಘಾತಗಳು ಹೆಚ್ಚಾಗ್ತಿದೆ. ಅದನ್ನು ಸರಿಪಡಿಸುವಂತೆ ಕುಲಸಚಿವರಿಗೆ ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಯಸಿಂಹ ಪತ್ರ ಬರೆದಿದ್ದಾರೆ. ಭಾರತೀಯ ರಸ್ತೆ ಕಾಂಗ್ರೆಸ್ನ ನಿಯಮದಂತೆ ನಿರ್ಮಾಣವಾಗಿಲ್ಲ.. ಹೀಗಾಗಿ ಬೆಂಗಳೂರು ವಿವಿ ಆವರಣದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ.