ಸಿಂಡಿಕೇಟ್ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಹಣ ಪಡೆಯಲು ಹೋದ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರನ್ನು ಅವಮಾನಿಸಿ ಬ್ಯಾಂಕ್ ನಿಂದ ಹೊರ ಹಾಕಿದ ಅಮಾನವೀಯ ಘಟನೆ ನಡೆದಿದೆ.ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬ್ಯಾಂಕ್ ಗೆ ಬರುವ ಮಹಿಳೆಯರು ಬಂದ ಕೆಲಸವಾಗದೆ ಬ್ಯಾಂಕ್ ಮುಂದೆ ಪರದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಕಳೆದ ಒಂದು ವಾರದಿಂದ ಶ್ರೀ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ದಿ ಸಂಘದ ಆಶ್ರಯದಲ್ಲಿ ತಾಲೂಕಿನಾದ್ಯಂತ ನಡೆಯುವ ಮಹಿಳಾ ಸ್ವಸಹಾಯ