ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಸವ ಸೇನಾ ವಿರೋಧ ‘

ವಿಜಯಪುರ| Jagadeesh| Last Modified ಶುಕ್ರವಾರ, 19 ಅಕ್ಟೋಬರ್ 2018 (20:38 IST)
ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಮಾತನಾಡಿರುವ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ರಾಷ್ಟ್ರೀಯ ಬಸವ ಸೇನಾ ವತಿಯಿಂದ ಪ್ರತಿಭಟನೆ ನಡೆದಿದೆ.

ವಿಜಯಪುರ ನಗರದ ಬಸವೇಶ್ವರ ವೃತ್ತದ ಬಳಿ ಬಸವ ಸೇನಾದಿಂದ ಪ್ರತಿಭಟನೆ ನಡೆಸಲಾಯಿತು. ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ವಿರೋಧಿಸಿ ರಾಷ್ಟ್ರೀಯ ಬಸವ ಸೇನಾ ಸದಸ್ಯರು ಘೋಷಣೆ ಕೂಗಿದರು.

ಡಿಕೆಶಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಸವಣ್ಣ ವಿರೋಧಿ ಡಿ.ಕೆ.ಶಿವಕುಮಾರ್ ಅಂತಾ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕೂಡಲೇ ಸಚಿವ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.


ಇದರಲ್ಲಿ ಇನ್ನಷ್ಟು ಓದಿ :