ಬಾಗಲಕೋಟೆ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಸವಜಯ ಮೃತ್ಯುಂಜಯಶ್ರೀಗಳು ಕಿಡಿಕಾರಿದ್ದಾರೆ. ಬಸವಜಯ ಮೃತ್ಯುಂಜಯಶ್ರೀಗಳ ಜನ್ಮದಿನೋತ್ಸವದ ಹಿನ್ನಲೆಯಲ್ಲಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಸಲಾಗಿದೆ.ಈ ವೇಳೆ ಮಾತನಾಡಿದ ಶ್ರೀಗಳು, ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಸ್ಪಂದಿಸಲೇ ಇಲ್ಲ. ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಬಸವಜಯ ಮೃತ್ಯುಂಜಯಶ್ರೀಗಳು ಎಚ್ಚರಿಕೆ ನೀಡಿದ್ದಾರೆ.