ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಳುವಾಗಿರುವ ಪಿಎಸ್ಐ ನೇಮಕಾತಿ ಅಕ್ರಮ, 40% ಕಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 40% ಕಮಿಷನ್ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಪೂರ್ಣ ಬೆಂಬಲ ಸಿಕ್ಕಿದೆ. ನಾ ಖಾವೋಂಗಾ ನಾ ಖಾನೇ ದೂಂಗಾ ಎಂದು ಹೇಳುತ್ತಾರೆ. ಆದರೆ, ಯಾವುದೂ ಆಚರಣೆಯಲ್ಲಿಲ್ಲ. ಭ್ರಷ್ಟರ ವಿರುದ್ಧ ಕ್ರಮ ಜರುಗಿಸಿಲ್ಲ.ಕಾಂಗ್ರೆಸ್ ಸರ್ಕಾರದ ವಿರುದ್ಧ ಶೇ 10ರಷ್ಟು ಕಮಿಷನ್ ಆರೋಪ ಮಾಡಿದ