ರಾಜ್ಯಕ್ಕೆ ಬರಬೇಕಾದ 5500 ಕೋಟಿ ರೂ.ವನ್ನು ಕೇಂದ್ರ ಹಣಕಾಸು ಸಚಿವರು ತಡೆ ಹಿಡಿದಿದ್ದಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಬೆಂಗಳೂರಿನಲ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, 15 ನೇ ಹಣಕಾಸಿನ ಶಿಫಾರಸ್ಸಿನ ಪ್ರಕಾರ ರಾಜ್ಯಕ್ಕೆ ಹಣ ಬರಬೇಕು ನಿಜ. ಈ ಬಗ್ಗೆ ಕೇಂದ್ರಕ್ಕೆ ಸಿಎಂ ಪತ್ರ ಬರೆದು ಒತ್ತಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಗೆ ಹೋಗಿ ರಾಜ್ಯದ ಹಕ್ಕನ್ನ ಪಡೆಯುವ ಕೆಲಸ ಮಾಡುತ್ತೇವೆ ಎಂದರು. ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್