ಯಾದಗಿರಿ : ಸ್ವಾತಂತ್ರ್ಯ ಬಂದ ಮೇಲೆ ದೇಶ ಒಡೆದಿರಿ. ಆಮೇಲೆ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದೀರಿ. ವೀರಶೈವ ಲಿಂಗಾಯತರನ್ನು ಒಡೆಯಲು ಹೋಗಿ ಮಣ್ಣು ಮುಕ್ಕಿದ್ದೀರಿ. ಈಗ ಅದೇ ತಪ್ಪನ್ನು ಮಾಡುತ್ತಿದ್ದೀರಿ. ತಾಕತ್ ಇದ್ದರೆ, ಧಮ್ ಇದ್ದರೆ ಮೀಸಲಾತಿಯನ್ನು ಮುಟ್ಟಿ ನೋಡಿ. ಈ ಕೇಸರಿ ಅಲೆಯನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಬಿಜೆಪಿ ಅಭ್ಯರ್ಥಿ ಅಮೀನರೆಡ್ಡಿ ಪಾಟೀಲ ಯಾಳಗಿ ಪರ