ಬೆಂಗಳೂರು: ಖಾತೆ ಹಂಚಿಕೆ ಬಳಿಕ ಎದುರಾಗಿದ್ದ ಎಲ್ಲಾ ಭಿನ್ನಮತಗಳನ್ನು ಶಮನಗೊಳಿಸರುವ ಸಿಎಂ ಬಸವರಾಜ ಬೊಮ್ಮಾಯಿಯವರು ಶನಿವಾರ (ಸೆಪ್ಟೆಂಬರ್ 4) ಸಚಿವ ಸಂಪುಟ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಈ ಹಿಂದೆ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಅವರೂ ಕೂಡ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸೆಪ್ಟೆಂಬರ್ 4 ರಂದು ನಡೆಯುವ ಸಭೆಯಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ ಹಾಗೂ ಹಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ. ಪ್ರಮುಖವಾಗಿ ಸ್ವಾತಂತ್ರ್ಯ ದಿನಾಚರಣೆ ದಿನದಂದು ಮುಖ್ಯಮಂತ್ರಿಗಳು