ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಜೂನ್ 20ಕ್ಕೆ ಬೆಂಗಳೂರಿಗೆ ಆಗಮಿಸಿದ್ದರು. ಮೋದಿ ಆಗಮಿಸುತ್ತಿದ್ದಾರೆಂದು ಕಳಪೆ ರಸ್ತೆ ನಿರ್ಮಿಸಿದ ಗುತ್ತಿಗೆದಾರನಿಗೆ ಬಿಬಿಎಂಪಿ 3 ಲಕ್ಷ ರೂ. ದಂಡ ವಿಧಿಸಿದೆ. ಕಳಪೆ ಕಾಮಗಾರಿ ಹಿನ್ನಲೆ ಬಿಬಿಎಂಪಿ ಮೂವರು ಅಧಿಕಾರಿಗಳಿಗೆ ಮುಖ್ಯ ಅಭಿಯಂತರ ಪ್ರಹ್ಲಾದ್ ಶೋಕಾಸ್ ನೋಟಿಸ್ ಜಾರಿ ಮಾಡಿ ನಿನ್ನೆ ಆದೇಶ ಹೊರಡಿಸಿದ್ದರು. ನೋಟಿಸ್ ಜಾರಿ ಮಾಡಿದ ಬೆನ್ನಲೆ ಗುತ್ತಿಗೆದಾರ ರಮೇಶ್ ಎಂಬುವವರಿಗೆ ಬಿಬಿಎಂಪಿ 3 ಲಕ್ಷ ರೂ