ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಇಂದು ಕೋಲಾಹಲ ಸೃಷ್ಟಿಸಿದೆ. ಮೂವರು ಕಾರ್ಪೋರೇಟರ್ಗಳು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ವರದಿಯಾಗಿದೆ. ಲಗ್ಗೆರೆ ಕ್ಷೇತ್ರದ ಜೆಡಿಎಸ್ ಕಾರ್ಪೋರೇಟರ್ ಮಂಜುಳಾ ನಾರಾಯಣ ಸ್ವಾಮಿ ಇಂದು ಕಪ್ಪು ಪಟ್ಟಿ ಧರಿಸಿ ಸದನಕ್ಕೆ ಆಗಮಿಸಿದ್ದರು. ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಆದರೆ, ಮೇಯರ್ ಜಿ.ಪದ್ಮಾವತಿ ಶೂನ್ಯ ವೇಳೆಯಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಮಹಿಳಾ ಕಾರ್ಪೋರೇಟರ್ಗಳು ಸದನದ ಬಾವಿಗಿಳಿದು