ಬೆಂಗಳೂರು : ರಾಜ್ಯದೆಲ್ಲೆಡೆ ಜನರು ಗೌರಿ- ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಮನೆಮನೆಯಲ್ಲೂ ಗಣೇಶನ ವಿಗ್ರಹವಿಟ್ಟು ಪೂಜೆ ನಡೆಸಲಾಗುತ್ತಿದೆ. ಗಣೇಶ ಮೂರ್ತಿ ವಿಸರ್ಜನೆಗಾಗಿ ಬಿಬಿಎಂಪಿ ವತಿಯಿಂದ ನಗರದ ಸ್ಯಾಂಕಿ ಕೆರೆ, ಹಲಸೂರು ಕೆರೆ ಮತ್ತು ಯಡಿಯೂರು ಕೆರೆ ಸೇರಿದಂತೆ ಹಲವೆಡೆ ವ್ಯವಸ್ಥೆ ಮಾಡಲಾಗಿದೆ. 1 ಲಕ್ಷ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿದ್ದು, ದೊಡ್ಡ ಗಣಪತಿ ವಿಸರ್ಜನೆಗೆ ಕ್ರೇನ್ ಬಳಸಲು ಸೂಚಿಸಲಾಗಿದೆ. ಆದರೆ ಪಿಓಪಿ(ಪ್ಲಾಸ್ಟರ್ ಆಫ್ ಪ್ಯಾರೀಸ್) ಗಣೇಶ ಮೂರ್ತಿಯ ವಿಸರ್ಜನೆಗೆ