ಬೆಂಗಳೂರು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೇಯರ್ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಪ್ರಭಾವಿಗಳ ಕಟ್ಟಡಗಳನ್ನು ತೆರುವುಗೊಳಿಸಲು ಹಿಂದೇಟು ಹಾಕುತ್ತಿದ್ದು, ಕೇವಲ ಬಡವರ ಮನೆಗಳನ್ನು ಮಾತ್ರ ತೆರವುಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಗರದಲ್ಲಿ ಪ್ರಭಾವಿ ಬಿಲ್ಡರ್ಗಳು