ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಸದ ಸಮಸ್ಯೆ ಮತ್ತೆ ಶುರುವಾಗಿದೆ. ಇದಕ್ಕೆಲ್ಲಾ ಕಾರಣ ಪೌರ ಕಾರ್ಮಿಕರ ಪ್ರತಿಭಟನೆ. ಆದರೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮೇಯರ್ ಪದ್ಮಾವತಿಗೆ ಪ್ರತಿಭಟನಾಕಾರರು ಮುಜುಗರವುಂಟು ಮಾಡಿದ್ದಾರೆ. ಗುತ್ತಿಗೆದಾರರನ್ನು ರದ್ದು ಪಡಿಸಿ, ಬಿಬಿಎಂಪಿಯಿಂದ ನೇರ ವೇತನ ನೀಡುವ ಪದ್ಧತಿ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಲು ಸ್ಥಳಕ್ಕೆ ಭೇಟಿ ನೀಡಿದ ಮೇಯರ್ ಪದ್ಮಾವತಿ ಪ್ರತಿಭಟನೆ ಸ್ಥಗಿತಗೊಳಿಸುವಂತೆ ಮನವಿ ಮಾಡಿದರು.