ಬೆಳ್ಳಂಬೆಳಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ, ಸುಮಾರು 100 ಕೋಟಿ ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ. ನಗರದ ಎಚ್ ಬಿಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ 15 ಕ್ಕೂ