ನಿಯಮಗಳನ್ನು ಗಾಳಿಗೆ ತೂರಿ ಬಿಡಿಎ ಅಧ್ಯಕ್ಷರ ಆಪ್ತ ಸಹಾಯಕ ಹುದ್ದೆಗೆ ನೇಮಕಾತಿ ಮಾಡಿದ್ದಲ್ಲದೇ, ಮೂರು ಲಕ್ಷ ರೂಪಾಯಿಗೂ ಅಧಿಕ ವೇತನ ನೀಡುತ್ತಿರುವುದಕ್ಕೆ ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಮಥಾಯಿ, ಬಿಡಿಎ ಹಾಗೂ ಕರ್ನಾಟಕ ಸರ್ಕಾರದ ನಿಯಮಾವಳಿಯನ್ನು ಉಲಂಘಿಸಿ ಸೋಮಶೇಖರ್ ಎಂಬುವವರನ್ನು ಎಸ್.ಆರ್.ವಿಶ್ವನಾಥ್ರವರ ಆಪ್ತ ಸಹಾಯಕ ಹುದ್ದೆಗೆ ನೇಮಕ ಮಾಡಲಾಗಿದೆ. ಕೆಎಎಸ್ ಜೂನಿಯರ್ ಸ್ಕೇಲ್