ಬೆಂಗಳೂರು (ಆ.14): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ಅವರಿಗೆ ಅತಿ ಶೀಘ್ರದಲ್ಲೇ ಸ್ಥಾನ ಸಿಗಲಿದೆ ಎಂದು ಅರಬಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಆರ್.ಟಿ.ನಗರದಲ್ಲಿ ಮುಖ್ಯಮಂತ್ರಿಗಳ ಖಾಸಗಿ ನಿವಾಸದಲ್ಲಿ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ ಅವರು, ನಾನು ಸಚಿವ ಸ್ಥಾನಕ್ಕೆ ಆಸೆ ಪಟ್ಟಿಲ್ಲ. ನಾನು ಕೆಎಂಎಫ್ನಲ್ಲೇ ಒಳ್ಳೆಯ ಕೆಲಸ