ಕ್ಷುಲ್ಲಕ ಕಾರಣಕ್ಕೆ ದೊಣ್ಣೆ, ವಿಕೆಟ್ ಹಿಡಿದು ಕಾಲೇಜು ವಿದ್ಯಾರ್ಥಿಗಳು ನಡುರಸ್ತೆಯಲ್ಲಿ ಗೂಂಡಾಗಿರಿ ಮಾಡಿದ್ದಾರೆ. ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ಕಾಲೇಜು ಬಳಿ ಘಟನೆ ನಡೆದಿದ್ದು, ಕೈನಲ್ಲಿ ವಿಕೆಟ್ ಮತ್ತು ದೊಣ್ಣೆಗಳಿಡಿದು ಓಡಾಡುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಪ್ರತಿನಿತ್ಯ ಕಾಲೇಜು ಬಳಿ ಪುಂಡ ಯುವಕರಿಂದ ದಾಂಧಲೆ ಹೆಚ್ಚಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳ ದಾಂಧಲೆಗೆ ಸುತ್ತಮುತ್ತಲಿನ ಗ್ರಾಮಸ್ಥರು ಬಿಚ್ಚಿಬಿದ್ದಿದ್ದಾರೆ. ಯುವಕರು ಗೂಂಡಾಗಿರಿ ಮಾಡ್ತಿದ್ರು ರಾಜಾನುಕುಂಟೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿದ್ದಾರೆ.