ಆ್ಯಪ್ ಮೂಲಕ ಗಾಳ ಹಾಕಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸೋಲದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುನಿಲ್ ಹಾಗೂ ಲಕ್ಷ್ಮಿಪ್ರಿಯ ಬಂಧಿತ ಆರೋಪಿಗಳು. ಮೋಸ ಹೋದ 26 ವರ್ಷದ ವ್ಯಕ್ತಿಯೊಬ್ಬ ನೀಡಿದ ದೂರಿನನ್ವಯ ಆರೋಪಿಗಳನ್ನ ಬಂಧಿಸಲಾಗಿದೆ. ಆ್ಯಪ್ ಮೂಲಕ ದಿವ್ಯಾ ಎಂಬ ಹೆಸರಿನಲ್ಲಿ ಪರಿಚಯವಾಗಿದ್ದವಳ ಜೊತೆ ಸಲುಗೆ ಸಂಪಾದಿಸಿದ್ದ ದೂರುದಾರ ವ್ಯಕ್ತಿ ಒಂದಷ್ಟು ಫೋಟೋ, ವೀಡಿಯೋ ವಿನಿಮಯವಾದ ಬಳಿಕ ಜನವರಿ 4ರಂದು ತನ್ನ ಮನೆಗೆ ಆಹ್ವಾನಿಸಿದ್ದ. ದಿವ್ಯಾ ಎಂಬ