ಬೈಕ್`ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ ಮನೆ ಮೇಲೆ ಮಾಂಸದ ತುಂಡು, ಬಿಯರ್ ಬಾಟಲಿ ಎಸೆದು ಪರಾರಿಯಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ಮಾಮಸದ ತುಂಡು, ಬಿಯರ್ ಬಾಟಲಿ ಎಸೆದು ಪರಾರಿಯಾಗಿದ್ದಾರೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.