ಪ್ರತಿಭಟನೆಗಳ ಹಿಂದೆ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ-ಸಿಎಂ ಆರೋಪ

ಬೆಂಗಳೂರು| pavithra| Last Modified ಗುರುವಾರ, 19 ಡಿಸೆಂಬರ್ 2019 (11:00 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಭಟನೆ ಹಿನ್ನಲೆ ಪ್ರತಿಭಟನೆಗಳ ಹಿಂದೆ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಟಿ ಖಾದರ್ ಅಂಥವರಿಂದ ಪ್ರತಿಭಟನೆಯಾಗುತ್ತದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಸಮಸ್ಯೆ ಆಗಿಲ್ಲ. ಮುಸ್ಲಿಂರ ಸಂಪೂರ್ಣ ರಕ್ಷಣೆ ನಮ್ಮ ಹೊಣೆ. ರಾಜ್ಯದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡಬೇಡಿ. ಕಾನೂನು ಸುವ್ಯವಸ್ಥೆ ವಿರುದ್ಧ ನಡೆದುಕೊಂಡ್ರೆ ಕ್ರಮ ಜರುಗಿಸುವಂತೆ ಡಿಜಿ ಮತ್ತು ಐಜಿಪಿ ನೀಲಮಣಿ ಎನ್ ರಾಜುಗೆ ಸಿಎಂ ಸೂಚನೆ ನೀಡಿದ್ದಾರೆ.


ಈಗಾಗ್ಲೆ ಸಿಎಎ ವಿರೋಧಿಸಿ ಹಲವು ರಾಜ್ಯಗಳಲ್ಲಿ ಹಿಂಸಾಚಾರವಾಗಿದೆ. ನಮ್ಮ ರಾಜ್ಯದಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಿ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :