ಬೆಳಗಾವಿ : ಬೆಳಗಾವಿ ಸ್ಥಳೀಯ ಸಂಸ್ಥೆಯಿಂದ ಡಿಸೆಂಬರ್ 10ಕ್ಕೆ ಪರಿಷತ್ ಎರಡು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದು ಬೆಳಗಾವಿ ಜಿಲ್ಲೆಯಲ್ಲಿ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಕಾಂಗ್ರೆಸ್, ಬಿಜೆಪಿ ಪಕ್ಷ ಇನ್ನೂ ತಮ್ಮ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಆದರೆ ಕಾಂಗ್ರೆಸ್ ನಿಂದ ಚನ್ನರಾಜ್ ಹಟ್ಟಿಹೊಳಿ ಹಾಗೂ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಕಣಕ್ಕೆ ಇಳಿಯೋದು ಬಹುತೇಕ ಖಚಿತವಾಗಿದೆ. ಇಬ್ಬರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಕಣಕ್ಕೆ ಇಳಿಯುತ್ತಿರೋದು ದೊಡ್ಡ ತಲೆನೋವು ಆಗಿದೆ.