ತುಮಕೂರು : ರಾಜಕಾರಣದಲ್ಲಿ ಜಾತಿ ಮತ್ತು ದುಡ್ಡಿನ ಬಲವೇ ಪ್ರಮುಖ ಪಾತ್ರ ವಹಿಸುತ್ತದೆ. ಅಭಿವೃದ್ಧಿ ನೋಡಿ ಮತ ಹಾಕುವ ಆದ್ಯತೆಯ ಪ್ರಮಾಣ ಕಡಿಮೆ. ಪ್ರಬಲ ಜಾತಿಯ ಮತಗಳೇ ನಿರ್ಣಾಯಕವಾಗಿ, ಕ್ಷೇತ್ರದಿಂದ ಸ್ಪರ್ಧಿಸಿದ ಪ್ರಬಲ ಸಮುದಾಯದ ಅಭ್ಯರ್ಥಿಯೇ ಗೆಲ್ಲೋದು ಹೆಚ್ಚು. ಅಪರೂಪಕ್ಕೆ ಎಂಬಂತೆ ಜಾತಿ ಪ್ರಾಬಲ್ಯ ಇಲ್ಲದೇ ಇದ್ದರೂ ಗೆದ್ದು ಸಚಿವ ಸ್ಥಾನ ಅಲಂಕರಿಸಿದವರೂ ಇದ್ದಾರೆ. ಸಮುದಾಯದ ಮತ ನಂಬದೇ ಸರಳತೆ, ಕ್ಷೇತ್ರದ ಜನರೊಂದಿಗಿನ ಆಪ್ತತೆ ಹಾಗೂ ಅಭಿವೃದ್ಧಿ ಕೆಲಸದ