ಬಳ್ಳಾರಿ ಬಿಜೆಪಿಯಲ್ಲಿ ಭಿನ್ನಮತ ಕಾಣಿಸಿಕೊಂಡಿದೆ. ಟಿಕೆಟ್ ಕೈತಪ್ಪುವ ಭೀತಿ ಹಿನ್ನಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದು, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.ನಾನು ಕಳೆದ ಐದಾರು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದೇನೆ. ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿಗೆ ಕೊಡುಗೆ ಕೊಟ್ಟಿದ್ದೇನೆ. ಮೂರ್ನಾಲ್ಕು ಬಾರಿ ನನಗೆ ಬೇರೆ, ಬೇರೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದೆ. ಹಾಗಾಗಿ ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿದ್ದೇನೆ ಎಂದು ಡಾ.ಶ್ರೀನಿವಾಸ್