ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆಯ ಕುರಿತಾಗಿ ಉಂಟಾಗಿರುವ ಅಸಮಾಧಾನದ ಇಫೆಕ್ಟ್ ಬಿಜೆಪಿಗೆ ದೊಡ್ಡ ಆಘಾತ ನೀಡಲಿರುವ ಸೂಚನೆ ಸಿಕ್ಕಿದೆ.ಸಾಗರ ಟಿಕೆಟ್ ಸಿಗದೇ ನಿರಾಶರಾಗಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರ ವಿರುದ್ಧ ಕೂಗಾಡಿದ್ದರು. ಇದೀಗ ಅವರು ಬಿಜೆಪಿ ತೊರೆಯುವ ಸೂಚನೆ ನೀಡಿದ್ದಾರೆ.ಇಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚಿಸಲಿರುವ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.