ಪ್ರಧಾನಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಂಡ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಇಂದಿನಿಂದಲೇ ಟೋಲ್ ವಿಧಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಕಲೆಕ್ಟ್ ಮಾಡಲಾಗ್ತಿದೆ. ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೇ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ಸರ್ಕಾರದ ನಡೆಗೆ ವಿವಿಧ ಸಂಘಟನೆಗಳು ಆಕ್ರೋಶಗೊಂಡಿವೆ.75 ರಿಂದ 135 ರೂ ಟೋಲ್ ಹಣ ಕಲೆಕ್ಟ್ ಮಾಡಲು ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಹಾಗೂ ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿ ಬಳಿ ಹೆದ್ದಾರಿ ಪ್ರಾಧಿಕಾರ ಎರಡು ಟೊಲ್