ಕಳೆದ ಒಂದು ತಿಂಗಳಿನಿಂದ ಹಲವು ಕಾರಣಕ್ಕೆ ಸದಾ ಸುದ್ದಿಯಲ್ಲಿರುವ ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇ ಟೋಲ್ ದರ ಹೆಚ್ಚಳ ಮಾಡಲಾಗಿದೆ. ಈಗಿರುವ ಟೋಲ್ ದರ ಹೆಚ್ಚಾಗಿದೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿರುವ ಮಧ್ಯೆಯೇ NHAI ಮತ್ತೆ ಶೇಕಡಾ 22ರಷ್ಟು ಟೋಲ್ ದರ ಹೆಚ್ಚಿಸಿದೆ.