ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದ ಕಮ್ಮನಹಳ್ಳಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಲೆನೋ ಮತ್ತು ಅಯ್ಯಪ್ಪ ಎನ್ನುವವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂದು ರಾತ್ರಿ 2.40 ರ ಸುಮಾರಿಗೆ ಅಯ್ಯಪ್ಪ ದ್ವಿಚಕ್ರ