ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗದ ಉದ್ಘಾಟನಾ ಸಮಾರಂಭದ ಬೆನ್ನಲ್ಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ತೀವ್ರ ಸ್ವರೂಪದ ಕ್ರೆಡಿಟ್ ವಾರ್ ಶುರುವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅಧಿಕೃತ ಭಾಷಣವನ್ನು ಕೊನೆ ಕ್ಷಣದಲ್ಲಿ ಕೈಬಿಟ್ಟಿರುವುದು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕರ್ನಾಟಕಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಶಿಕ್ಷೆ ಇದೇ ಎಂದು ಸಚಿವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.