ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಇನ್ನೂ ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲೂ ಕಳೆದ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್ 31ರವರೆಗೂ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ಮೈಸೂರು, ದಕ್ಷಿಣ