ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಗಮನ ಹರಿಸಲು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ನಗರ ಸಭೆ, ನಗರ ಪಾಲಿಕೆ ಹಾಗು ಮಹಾನಗರ ಪಾಲಿಕೆ ವ್ಯಾಪ್ತಿಯ ಗ್ರಾಹಕರಿಗೆ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಬೆಸ್ಕಾಂ ಎಂಡಿ