ಬೆಂಗಳೂರು :ಎಲ್.ಕೆ.ಅಡ್ವಾಣಿಯವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿದ ಕೇಂದ್ರ ಬಿಜೆಪಿ ಸರಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸ್ವಾಗತಿಸಿದ್ದಾರೆ. ದೊಂದು ಉತ್ತಮ ನಿರ್ಧಾರ. ಅರ್ಹತೆಯನ್ನು ಗುರುತಿಸಿ ಈ ಆಯ್ಕೆ ಮಾಡಲಾಗಿದೆ ಎಂದರು.ಅಡ್ವಾಣಿ ಅವರು ಭಾರತದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಕೇಂದ್ರ ಗೃಹ ಸಚಿವ ಮತ್ತು ಮಾಹಿತಿ- ತಂತ್ರಜ್ಞಾನ ಸಚಿವರಾಗಿ ಅವರು ಸಮರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಸಂಸದೀಯ ನಡೆಯೂ ಆದರ್ಶಪ್ರಾಯವಾಗಿವೆ ಎಂದು ವಿಜಯೇಂದ್ರ ಅವರು ಮೆಚ್ಚುಗೆ ಸೂಚಿಸಿದ್ದಾರೆ.