ಮಂಡ್ಯ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಲಕ್ಷಾಂತರ ಜನರು ಶಿವಕುಮಾರ ಸ್ವಾಮೀಜಿಯವರನ್ನು ನಡೆದಾಡುವ ದೇವರು ಎಂದೇ ಆರಾಧಿಸುತ್ತಾರೆ. ಅವರು ಭಾರತ ರತ್ನಕ್ಕೆ ಭಾಜನರಾಗುವುದನ್ನು ಜನ ಎದುರು ನೋಡುತ್ತಿದ್ದಾರೆ. ಕಾಯಕಯೋಗಿ ಆಗಿರುವ ಅವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 111 ವರ್ಷದ ಶಿವಕುಮಾರ ಸ್ವಾಮೀಜಿ ಅವರು