ಇಡೀ ಕರವಾಳಿ ಹಾಗೂ ದೇಶವನ್ನೇ ಬೆಚ್ಚಿ ಬೀಳಿಸಿದ ಅನಿವಾಸಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಸುಪ್ರೀಮ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದ್ರೆ ಸದ್ಯಕ್ಕೆ ರಾಜೇಶ್ವರಿ ಶೆಟ್ಟಿಗೆ ಬಿಡುಗಡೆ ಭಾಗ್ಯ ಇಲ್ಲ. ಪ್ರಕರಣಕ್ಕೆ ಸಂಭಂದಿಸಿದಂತೆ ಪ್ರಮುಖ 36 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಬಳಿಕವೇ ರಾಜೇಶ್ವರಿ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಸುಪ್ರೀಮ್ ಕೋರ್ಟು ಉಡುಪಿ ಜಿಲ್ಲಾ ಸತ್ರ ನ್ಯಾಯಾಲಕ್ಕೆ ಆದೇಶ ನೀಡಿದೆ. ಎಸ್.