ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ವಿಚಾರಣೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆ.13ರಿಂದ ಮತ್ತೆ ಆರಂಭಗೊಳ್ಳಲಿದೆ.ಪ್ರಕರಣದ ವಿಚಾರಣೆ ಆರಂಭಕ್ಕೆ ದಿನ ನಿಗದಿ ಪಡಿಸಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ, ಆ.13, 14, 16 ಹಾಗೂ 18 ರಂದು ಒಟ್ಟು 17 ಸಾಕ್ಷಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವಂತೆ ಆದೇಶ ನೀಡಿದ್ದಾರೆ. ಸಾಕ್ಷಿಗಳ ವಿಚಾರಣೆಯನ್ನು ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್