ಬೆಂಗಳೂರು: ಕೇಂದ್ರ ಸರ್ಕಾರ ಮಹಿಳೆಯರನ್ನು ಕಡೆಗಣಿಸಿದ್ದು, ಮಹಿಳೆಯರನ್ನ ಕಿಚನ್ ನಲ್ಲೇ ನೋಡಲು ಅವರು ಬಯಸುತ್ತಾರೆ ಎಂದು ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಕೆಪಿಸಿಸಿ ಮಹಿಳಾ ಘಟಕದಿಂದ ಆಯೋಜಿಸಿರುವ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ದೆಹಲಿ, ಗುಜರಾತ್ ನಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿವೆ. ಇದರ ಬಗ್ಗೆ ಕೇಂದ್ರ ಯಾವ ಕ್ರಮಕೈಗೊಂಡಿದೆ. ಲೋಕಸಭೆಯಲ್ಲಿ ಎಷ್ಟು ಮಂದಿ ಮಹಿಳಾ ಸದಸ್ಯರಿದ್ದಾರೆ. ಮಹಿಳೆಯರಿಗೆ ರಾಜಕೀಯ ಸ್ಥಾನಮಾನ