ಚಿತ್ರದುರ್ಗ : ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡದ ಹಿನ್ನೆಲೆ ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಅಸಮಾಧಾನ ಹೊರಹಾಕಿದ್ದಾರೆ. ಚಿತ್ರದುರ್ಗದ ಭೋವಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರವಿಂದ ಲಿಂಬಾವಳಿ ಮತ್ತು ಗೂಳಿಹಟ್ಟಿ ಶೇಖರ್ ಅವರನ್ನು ಕಡೆಗಣನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ ಅವರು ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದರು. ಅವರನ್ನು