ಮುಖ್ಯಮಂತ್ರಿಗಳ ಜತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆ ನೀಡಿ ನೆರವಿಗಾಗಿ ಅರ್ಜಿ ಸಲ್ಲಿಸಿದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.ಫೆಬ್ರುವರಿ 20 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನದಲ್ಲಿ ಚನ್ನಪ್ಪ ಹಾಗೂ ಸುನಂದಮ್ಮ ಎಂಬವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಒದಗಿಸುವಂತೆ ಮನವಿ ಸಲ್ಲಿಸಿದ್ದರು.ಈ ಅರ್ಜಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಯ ಕಚೇರಿ ಸಿಬ್ಬಂದಿ ಪರಿಶೀಲಿಸಿದಾಗ ಅರ್ಜಿಯೊಂದಿಗೆ ಲಗತ್ತಿಸಿರುವ ಮಣಿಪಾಲ್ ಆಸ್ಪತ್ರೆಯ ವೈದ್ಯಕೀಯ ದಾಖಲೆಗಳು ಮೇಲ್ನೋಟಕ್ಕೇ