ಬಳ್ಳಾರಿ : ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲು ಮುಂದಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.ಬೆನಾಮಿ ಆಸ್ತಿ ಗಳಿಕೆ ಸಂಬಂಧ ದಾಖಲಾಗಿದ್ದ ನಾಲ್ಕು ಪ್ರಕರಣಗಳಲ್ಲಿ ಒಂದೇ ದಿನ ಜನಾರ್ದನ ರೆಡ್ಡಿಗೆ ಮುಕ್ತಿ ಸಿಕ್ಕಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಆಧರಿಸಿ ಬೆಂಗಳೂರಿನ ಸೆಷನ್ಸ್ ಕೋರ್ಟ್, ಗಾಲಿ ಜನಾರ್ದನ ರೆಡ್ಡಿ ವಿರುದ್ಧ ದಾಖಲಾದ ನಾಲ್ಕು ಪ್ರಕರಣಗಳನ್ನು ಇತ್ಯರ್ಥ ಮಾಡಿದೆ. ಯೂನಿಯನ್ ಆಫ್ ಇಂಡಿಯಾ ಮತ್ತು ಗಣಪತಿ ಡೀಲ್ಕಾಮ್ ಪ್ರೈವೆಟ್ ಲಿಮಿಟೆಡ್ ಪ್ರಕರಣದಲ್ಲಿ