ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರಕಾರವನ್ನು ಸಿಎಂ ಹಾಡಿಹೊಗಳಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರದ ನಡುವೆ ಘರ್ಷಣೆ ಮುಂದುವರೆದಿದ್ದರೂ, ರಾಜ್ಯದ COVID-19 ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸಹಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.ಕೇಂದ್ರ ಸರಕಾರದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಧನ್ಯವಾದ ತಿಳಿಸಿದ್ದು ಭಾರೀ ಅಚ್ಚರಿಗೆ ಕಾರಣವಾಗಿದೆ.ಈ ನಡುವೆ, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಕೆಲವು ಜನರು ನಿರಂತರವಾಗಿ ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡುತ್ತಿದ್ದಾರೆ