ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ಚುನಾವಣೆ ಹಿನ್ನಲೆ ಮೈಸೂರಿನ ಹೋಟೆಲ್ ನಲ್ಲಿ ಕಾಂಗ್ರೆಸ್ ಸದಸ್ಯರ ಜತೆಗಿದ್ದ ವಾಸಪ್ಪಗೌಡ ಎಸ್ಕೇಪ್ ಆಗಿದ್ದಾರೆ. ಈ ಹಿಂದೆ ಬಿಜೆಪಿಯಿಂದ ಗೆದ್ದಿದ್ದ ವಾಸಪ್ಪಗೌಡ, ಬಳಿಕ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಅಧ್ಯಕ್ಷರಾಗಿದ್ದರು. ನಂತರದಲ್ಲಿ ಕಾಂಗ್ರೆಸ್ ನವರು ವಾಸಪ್ಪಗೌಡರ ಮನವೊಲಿಸಿದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಲ್ಲಿದ್ದರು. ಆದರೆ ಇದೀಗ ಮೈಸೂರಿನ ಹೋಟೆಲ್ ನಲ್ಲಿ ಕಾಂಗ್ರೆಸ್ ಸದಸ್ಯರ ಜತೆಗಿದ್ದ ವಾಸಪ್ಪಗೌಡ