ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಗೆ ಬಿಗ್ ಶಾಕ್ ನೀಡಿದ ಹೈ ಕಮಾಂಡ್

ಬೆಂಗಳೂರು| Jagadeesh| Last Modified ಗುರುವಾರ, 19 ಡಿಸೆಂಬರ್ 2019 (17:29 IST)
ರಾಜ್ಯದ ಉಪ ಚುನಾವಣೆಯಲ್ಲಿ ಸೋಲಿನ ಬಳಿಕ ರಾಜೀನಾಮೆ ನೀಡಿದ್ದ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡುರಾವ್ ರಾಜೀನಾಮೆ ನೀಡಿದ್ದರು.

ಇವರಿಬ್ಬರ ರಾಜೀನಾಮೆಗಳನ್ನ ಅಂಗೀಕಾರ ಮಾಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಿದೆ.

ಸಿಎಲ್ ಪಿ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಈ ಎರಡೂ ಹುದ್ದೆಗಳಿಗೆ ಹೊಸಬರನ್ನು ಆಯ್ಕೆ ಮಾಡಲು ಕೈ ಪಡೆ ಸಿದ್ಧತೆ ನಡೆಸುತ್ತಿದೆ.


ಇದರಲ್ಲಿ ಇನ್ನಷ್ಟು ಓದಿ :