ಉಪ ಚುನಾವಣೆಯನ್ನ ಬಿಜೆಪಿ-ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿರುವ ನಡುವೆಯೇ ದೂರು, ಪ್ರತಿದೂರುಗಳು ದಾಖಲಾಗುತ್ತಿವೆ.ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದೆ.ಹೀಗಂತ ಆರೋಪಿಸಿರುವ ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ದಾಖಲು ಮಾಡಲಾಗಿದೆ. ಪರವಾನಗಿ ಇಲ್ಲದೆ ಸಭೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಮೇ 4 ರಂದು ಚಿಂಚೋಳಿಯ ಸೋನಾಲಗಿರಿ ಪಂಗರಗ ಗ್ರಾಮದಲ್ಲಿ ನಡೆದ ಕಾರ್ಯಕ್ರಮಕ್ಕೆ ಪರವಾನಿಗೆ ಪಡೆದುಕೊಂಡಿರಲಿಲ್ಲ.