50 ವರ್ಷಗಳ ಸುದೀರ್ಘ ರಾಜಕೀಯ ಜೀವನದಿಂದ ವೃತ್ತಿಯಾಗುತ್ತಿದ್ದೇನೆ. ಲೌಕಿಕ ಜೀವನದಿಂದ ಆಧಾತ್ಮಿಕ ಜೀವನದತ್ತ ಹೆಜ್ಜೆಯನ್ನಿಡುತ್ತಿದ್ದೇನೆ. ಇದೇ ತಿಂಗಳ ಮೇ 6ರಂದು ರಾಜರಾಜೇಶ್ವರಿ ದೇವಸ್ಥಾನದ ಕೈಲಾಸ ಮಠದ ಶ್ರೀ ಜಯೇಂದ್ರ ತೀರ್ಥ ಪುರಿ ಮಹಾಸ್ವಾಮಿಜಿಯವರಿಂದ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಲಿದ್ದೇನೆ ಎಂದು ಮಾಜಿ ಸಚಿವ ಹಾಗೂ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು ತಿಳಿಸಿದ್ದಾರೆ. ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕರ್ನಾಟಕ ರಾಜ್ಯ ನೀತಿ