ಬಳ್ಳಾರಿ : 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ನಿರಂತರ ಅತ್ಯಾಚಾರ ಮಾಡಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗೇನಹಳ್ಳಿ ನಿವಾಸಿ ಚಂದ್ರಶೇಖರ್ (60) ಅತ್ಯಾಚಾರ ಎಸಗಿದ ಬಿಜೆಪಿ ಕಾರ್ಯಕರ್ತನಾಗಿದ್ದು, ಈತ ಸಂತ್ರಸ್ತೆ ಪೋಷಕರ ಅಂಗಡಿಯಿಂದ ಆಗಾಗ ಟೀ ಕುಡಿಯಲು ಹೋಗುತ್ತಿದ್ದನು. ಅಷ್ಟೇ ಅಲ್ಲದೇ ಬಾಲಕಿಯಿಂದ ಟೀ ಮತ್ತು ಇತರೆ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದನು. ಆ ವೇಳೆ ಬಾಲಕಿಗೆ ದುಡ್ಡಿನ ಆಮಿಷವೊಡ್ಡಿ ಆರೋಪಿ ಚಂದ್ರಶೇಖರ್