ಮಂಗಳೂರು ನಗರವನ್ನು ನರಕ ಎಂದು ಹೇಳಿಕೆ ನೀಡಿದ್ದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರ ಮೇಲೆ 25 ಕ್ಕೂ ಹೆಚ್ಚು ಮೊಟ್ಟೆ ಎಸೆದು ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ ಘಟನೆ ವರದಿಯಾಗಿದೆ. ಖಾಸಗಿ ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ನಟಿ ರಮ್ಯಾ ಮಂಗಳೂರು ನಗರವನ್ನು ನರಕ ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳೂರು ನಗರದ ವಿಮಾನ ನಿಲ್ದಾಣದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ರಮ್ಯಾ ದೇಶ ಬಿಟ್ಟು ತೊಲಗಲಿ ಎಂದು ಬಿಜೆಪಿ ಕಾರ್ಯಕರ್ತರು