ದಕ್ಷಿಣ ಕನ್ನಡ, ಮಂಗಳೂರು ಜಿಲ್ಲೆಯಲ್ಲಿ ಶಾಂತಿ ನೆಲೆಸಿದ ಸಂದರ್ಭದಲ್ಲಿ ಬಿಜೆಪಿ ಬೈಕ್ ರ್ಯಾಲಿ ಆಯೋಜಿಸಿರುವುದು ಜಿಲ್ಲೆಯ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ತರುವಂತಹದಾಗಿದೆ ಎಂದು ಸಚಿವ ರಮಾನಾಥ್ ರೈ ಹೇಳಿದ್ದಾರೆ. ಬಿಜೆಪಿ ಆಯೋಜಿಸಿದ ಮಂಗಳೂರು ಚಲೋ ಕಾರ್ಯಕ್ರಮದಿಂದ ಸಾಮರಸ್ಯಕ್ಕೆ ಧಕ್ಕೆಯಾಗಲಿದೆ ಮಂಗಳೂರು ಚಲೋ ಕಾರ್ಯಕ್ರಮಕ್ಕೆ ತಮ್ಮ ಆಕ್ಷೇಪವಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂದು ಪ್ರಖ್ಯಾತವಾಗಿದೆ. ಈಗ ಜಿಲ್ಲೆ ಸಂಪೂರ್ಣ ಶಾಂತಿಯುತವಾಗಿದೆ. ಮಂಗಳೂರಿನಲ್ಲೂ ಯಾವುದೇ ಘರ್ಷಣೆಗಳು