ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮತದಾರರಿಗೆ ಆಮಿಷ ಒಡ್ಡಿ ಮತಪಡೆಯುವ ಕುತಂತ್ರವನ್ನು ನಡೆಸುತ್ತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಗಂಭೀರ ಆರೋಪ ಮಾಡಿದ್ದಾರೆ. ಅವರು ಇಂದು ಉಡುಪಿಯಲ್ಲಿ ಈ ವಿಚಾರವಾಗಿ ಮಾತನಾಡಿ, ರಾಜ್ಯದಲ್ಲಿ ಶಿಕ್ಷಕರ ಹಾಗೂ ಪದವೀದರರ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದಿಂದ ಪದವೀಧರರ ಕ್ಷೇತ್ರದಲ್ಲಿ ಎಸ್ .ಪಿ ದಿನೇಶ್ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಕೆ .ಕೆ ಮಂಜುನಾಥ್ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.