ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವಿಷಯ ಕಡಿತ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಗರು ಮತ್ತು ಬ್ರಿಟಿಷರು ಇಬ್ಬರೂ ಒಂದೇ ಎಂದಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್ ಮಾಡಿ ಡಿಲೀಟ್ ಮಾಡುವುದು ಎಂದಿದ್ದಾರೆ. ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ.