ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರೆಂದೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಬಿಜೆಪಿಯವರು ಮಿಷನ್ 150 ಎನ್ನುವ ಭ್ರಮೆಯಲ್ಲಿದ್ದಾರೆ. ಚುನಾವಣೆ ಫಲಿತಾಂಶ ಬಂದ ನಂತರ ಅವರ ಭ್ರಮೆ ನುಚ್ಚು ನೂರಾಗಲಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್, ಯಡಿಯೂರಪ್ಪ ತಾವೇ ಮುಂದಿನ ಮುಖ್ಯಮಂತ್ರಿ ಎನ್ನುವ ಕನಸು ಕಾಣುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 50 ಸೀಟು ಗೆಲ್ಲುವುದೇ ಅನುಮಾನವಾಗಿದೆ